ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ನಿಗಮದ ಮೂಲಕ ಮೆಗಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ರೈತರಿಗೆ ಆರ್ಥಿಕ ನೆರವು ನೀಡಲು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ ನೀಡಲಾಗುತ್ತದೆ ಮತ್ತು ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲು ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.
