ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶರಾಗಿದ್ದು ವಿಧಾನ ಸಭಾ ಚುನಾವಣೆ ಆರಂಭವಾಗುವ ಹೊತ್ತಲ್ಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಧ್ರುವನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ರಕ್ತವಾಂತಿ ಆರಂಭವಾದ ಕಾರಣ ತೀವ್ರ ರಕ್ತಸ್ರಾವದಿಂದ ಕೋಮಾಸ್ಥಿತಿ ತಲುಪಿದ್ದರು ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಧ್ರುವನಾರಾಯಣ ಅವರು ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡಿದ್ದ ಡಾ.ಮಂಜುನಾಥ್ ತಿಳಿಸಿದ್ದಾರೆ. ಧ್ರುವನಾರಾಯಣ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಹೃದಯಾಘಾತ, ರಕ್ತವಾಂತಿಯಿಂದ ಮೃತಪಟ್ಟಿರುವುದು ಕುಟುಂಬದವರಿಗೆ ಸಿಡಿಲು ಬಡಿದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





