Breaking News

ಮೋದಿಗೆ ಉಡುಗೊರೆಯಾಗಿ ಸಿದ್ದವಾಯಿತು ಸಾಂಪ್ರದಾಯಿಕತೆಯ ತೊಟ್ಟಿಲು

ಹುಬ್ಬಳ್ಳಿ : ಕಲಘಟಗಿ ಬಣ್ಣದ ತೊಟ್ಟಿಲು ಅಂದ್ರೆ ಎಲ್ಲರಿಗೂ ಅಚ್ಚು ಮೆಚ್ಚು. ರಾಜಕಾರಣಿ, ಜನಪ್ರತಿನಿಧಿಗಳ ಮಕ್ಕಳು ಮೊಮ್ಮಕ್ಕಳಿಗೆ ಕಲಘಟಗಿ ತೊಟ್ಟಿಲು ಉಡುಗೊರೆಯಾಗಿ ನೀಡುವುದು ಹೊಸ ಟ್ರೆಂಡ್ ಆಗಿದೆ. ಈ ನಿಟ್ಟಿನಲ್ಲಿ ಈಗ ಕಲಘಟಗಿ ತೊಟ್ಟಿಲು ಮತ್ತೊಬ್ಬ ಮಹಾನ ವ್ಯಕ್ತಿಯ ಕೈಸೇರಲಿದೆ.

12ರಂದು ಧಾರವಾಡ ಜಿಲ್ಲೆಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರು, ಐಐಟಿ ಉದ್ಘಾಟನೆ, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಲೋಕಾರ್ಪಣೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗ ಕಲಘಟಗಿಯ ತೊಟ್ಟಿಲು ಉಡುಗೊರೆಯಾಗಿ ನೀಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹಾವೇರಿಯ ಯಾಲಕ್ಕಿ ಮಾಲೆ, ಸಿದ್ಧಾರೂಢರ ಮೂರ್ತಿ, ಕಸೂತಿಯ ಶಾಲ್ ಸೇರಿದಂತೆ ಹಲವಾರು ಉಡುಗೊರೆ ನೀಡಲು ನಿರ್ಧಾರ ಮಾಡಲಾಗಿದೆ. ಎರಡು- ಮೂರು ತಲೆಮಾರಿನಿಂದ ತೊಟ್ಟಿಲು ಮಾಡುವ ಕಾಯಕ ಮಾಡಿಕೊಂಡು ಬಂದಿರುವ ಕುಟುಂಬದ ಮಾರುತಿ ಬಡಿಗೇರ, ತಿಪ್ಪಣ್ಣ ಬಡಿಗೇರ, ಹರೀಶ, ಶ್ರೀಶೈಲ ಬಡಿಗೇರ ಅವರು ನರೇಂದ್ರ ಮೋದಿಯವರಿಗೆ ಉಡುಗೊರೆ ನೀಡಲು ತೊಟ್ಟಿಲು ತಯಾರಿಸಿದ್ದಾರೆ.

ತೊಟ್ಟಿಲಿನ ಸುತ್ತಲೂ ಕೃಷ್ಣನ ಬಾಲ್ಯದ ಘಟನೆಗಳು, ತುಂಟಾಟಗಳು, ಬೆಣ್ಣೆಯೊಂದಿಗೆ ಕೃಷ್ಣ ಹೀಗೆ ಅನೇಕ ಕಥೆಗಳನ್ನು ಹೇಳಲು ಪ್ರೇರೇಪಿಸುವ ಚಿತ್ರಗಳನ್ನು ಸುಂದರವಾಗಿ ಬಿಡಿಸಲಾಗಿದೆ. ತೊಟ್ಟಿಲಿನ ಸ್ಟಾಂಡ್ ಗೆ ಚಿಕ್ಕ ಗಂಟೆಗಳನ್ನು ಕಟ್ಟಿದ್ದು, ಕಣ್ಮನ ಸೆಳೆಯುವ ಬಣ್ಣಗಳಿಂದ ಅಲಂಕರಿಸಲಾಗಿದೆ. ತೇಗಿನ ಮರದಿಂದ ಮಾಡಿರುವ ತೊಟ್ಟಿಲಿಗೆ ಜೇಡಿಮಣ್ಣು, ಅಂಟು, ಅರಗು ಬಳಸಲಾಗಿದೆ. ಸಾಂಪ್ರದಾಯಿಕತೆಗೆ ಒತ್ತು ಕೊಡಲಾಗಿದೆ. ಅತ್ಯುತ್ತಮ ಗುಣಮಟ್ಟದ ಕಟ್ಟಿಗೆಗಳನ್ನು ಬಳಸಲಾಗಿದ್ದು, ಕನಿಷ್ಠ 100 ವರ್ಷ ಬಾಳಿಕೆ ಬರುತ್ತದೆ. ಶ್ರೇಷ್ಠ ಗುಣಮಟ್ಟ ಮತ್ತು ಕಡಿಮೆ ತೂಕದ ತೊಟ್ಟಿಲು ನಿರ್ಮಿಸಿದ್ದೇವೆ’ ಎಂದು ಮಾರುತಿ ಬಡಿಗೇರ ಹೇಳುತ್ತಾರೆ.

Share News

About BigTv News

Check Also

ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಖೈದಿ

ಹುಬ್ಬಳ್ಳಿ: ಕಲಬುರ್ಗಿಯಿಂದ ಗಡಿಪಾರು ಆದೇಶದಲ್ಲಿದ್ದ ಆರೋಪಿತ ಮೌನುದ್ದೀನ್ ಲಾಲ್‌ಸಾಬ (47) ಎಂಬ ವ್ಯಕ್ತಿ ಹೊಟ್ಟೆ ನೋವು ನೆಪ ಹೇಳಿ ಪೊಲೀಸರಿಂದ …

Leave a Reply

Your email address will not be published. Required fields are marked *

You cannot copy content of this page