ಹುಬ್ಬಳ್ಳಿ: ಮಾರ್ಚ್ 12ರಂದು ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಪ್ಲಾಟ್‌ಫಾರ್ಮ್‌ನಲ್ಲಿ ಇಲೆಕ್ಟಿಕ್ ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ-ಧಾರವಾಡ ಎಕ್ಸ್‌ಪ್ರೆಸ್ ಮತ್ತು ಬೆಳಗಾವಿ- ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದರು. ಆ ಮೂಲಕ ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಲೋಕಾರ್ಪಣೆಗೊಳಿಸಿದ್ದರು. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಈಗ ಮತ್ತೊಂದು ಗೌರವದ ಗರಿಯನ್ನು ಮುಡಿಗೇರಿಸಿಕೊಂಡಿದೆ. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿರುವ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





