ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವ್ರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು. ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂತಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Check Also
ಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ …