Breaking News

ಯುವಕನ ಮೇಲೆ ಹಲ್ಲೆ: ಆರೋಪಿಗಳನ್ನು ಏಕೆ ಅರೆಸ್ಟ್ ಮಾಡ್ತಿಲ್ಲ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ಲಿಡಕರ್ ಕಾಲೋನಿ ನಿವಾಸಿಯಾಗಿರೋ ವಿಠಲ್ ಎಂಬ ಯುವಕನ ಮೇಲೆ ಮಾರ್ಚ್ 12 ರಾತ್ರಿ ಯುವಕರ ಗ್ಯಾಂಗ್ ಹಲ್ಲೆ ಮಾಡಿದೆ.

ಇಂಡಸ್ಟ್ರೀಸ್ ಏರಿಯಾದಲ್ಲಿ ಮದ್ಯಪಾನ ಮಾಡುತ್ತಾ ಕುಳತಿದ್ದ ಯುವಕರ ಗ್ಯಾಂಗ್. ಈ ವೇಳೆ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾಗ ವಿಠಲ ಇಲ್ಲಿ ಯಾಕೆ ಬಾಯಿ ಮಾಡ್ತೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ವಿಠಲ ಗೆ ಥಳಿಸಿದ್ದಾರೆ. ಅವರೆಲ್ಲ ಕುಡಿದ ಮತ್ತಿನಲ್ಲಿ ಥಳಿಸಿದ್ದಾರೆ ಎಂದು ವಿಠಲ ಆರೋಪ ಮಾಡಿದ್ದಾನೆ. ಹಲ್ಲೆಯಿಂದ ವಿಠಲ್ ತಲೆ, ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಸದ್ಯ ಹಲ್ಲೆ ಮಾಡಿದ ಗ್ಯಾಂಗ್ ನ್ನ ಪೊಲೀಸರು ಅರೆಸ್ಟ್ ಮಾಡ್ತಿಲ್ಲ ಎಂದು ವಿಠಲ್ ತನ್ನ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಯಾಕೆ ಆರೋಪಿಗಳನ್ನು ಅರೆಸ್ಟ್ ಮಾಡ್ತಿಲ್ಲ ಎಂಬುದೆ ಪ್ರಶ್ನೆಯಾಗಿದೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *