Breaking News

ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿ

ಹುಬ್ಬಳ್ಳಿ:ಕಿಮ್ಸ್ ನ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂತರಥಾನಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು,ಈಗಾಗಲೇ ಬೇರೆ ರಾಜ್ಯ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ‌ ಕಸಿ ಮಾಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಮೊದಲ ಬಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ತರಹದ ಕಿಡ್ನಿ ಕಸಿಯ ಶಸ್ತ್ರಚಿಕಿತ್ಸೆಯನ್ನು ಕೈಗೊಳ್ಳಲಾಗಿತ್ತು .ಅದು ಸಂಪೂರ್ಣವಾಗಿ ಯಶಸ್ವಿಯಾಗಿರುತ್ತದೆ ಎಂದು ಹೇಳಿದರು. ನಿರಂತರ 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿರುತ್ತದೆ. ಈಗ ರೋಗಿಯು ಆರೋಗ್ಯವಾಗಿದ್ದು, ಶಸ್ತ್ರ ಚಿಕಿತ್ಸೆಯಾದ 42 ಗಂಟೆಗಳಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಾರೆ. ಇಂದಿನ ವೈದ್ಯಕೀಯ ಬೆಳವಣಿಗೆಯಿಂದಾಗಿ ಈ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು. ರೂ. 2.70 ಲಕ್ಷ ವೆಚ್ಚದಲ್ಲಿ ಈ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಸಾಮಾನ್ಯವಾಗಿ ಈ ಚಿಕಿತ್ಸೆಗೆ ರೂ. 3.90 ಲಕ್ಷ ಖರ್ಚಾಗುವುದು ಎಂದರು.

ಮೂತ್ರಪಿಂಡ ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟೇಶ ಮೊಗೆರ, ಡಾ. ಮಲಗೌಡ ಪಾಟೀಲ, ಡಾ.ವಿವೇಕ ಗಾಣಿಗೇರ, ಮೂತ್ರ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರವಿರಾಜ ರಾಯ್ಕರ, ಡಾ. ಜೈದೀಪ್ ರಟಕಲ್, ಡಾ. ಮಂಜುಪ್ರಸಾದ ಜಿ.ಬಿ, ಡಾ.ಸಂಪತ್ತಕುಮಾರ ಎನ್.ಜಿ., ಡಾ. ಚೇತನ್ ಹೊಸಕಟ್ಟಿ, ಅರಿವಳಿಕೆ ವಿಭಾಗದ ಡಾ.ಮಾಧುರಿ ಕುರಡಿ, ಡಾ. ಶೀತಲ್ ಹಿರೇಗೌಡರ, ಡಾ.ರೂಪ, ರೋಗಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪುರುಷೋತ್ತಮ ರೆಡ್ಡಿ ಮತ್ತು ಶಿವಾನಂದ ಹೊನಕೇರಿ ಅವರನ್ನೊಳಗೊಂಡ ತಂಡ ಈ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ ತಂಡದವರಿಗೆ ಅಭಿನಂದನೆಗಳು ಎಂದು ಹೇಳಿದರು.

ಮೂತ್ರಪಿಂಡ ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟೇಶ ಮೊಗೆರ ಮಾತನಾಡಿ, ಶಸ್ತ್ರ ಚಿಕಿತ್ಸೆ ಪೂರ್ವದಲ್ಲಿ ರೋಗಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಯಿತು. ರೋಗಿ ಅಭಿಷೇಕ್ ಬೋಗಾರ್ ಅವರಿಗೆ ಅವರ ತಾಯಿ ಪದ್ಮಾವತಿ ಅವರು ಕಿಡ್ನಿ ನೀಡಿದ್ದಾರೆ. ಅಭಿಷೇಕ್ ಅವರ ರಕ್ತದ ಗುಂಪು ಎ ಪಾಸಿಟಿವ್ ಆಗಿತ್ತು, ಪದ್ಮಾವತಿ ಅವರು ಬಿ ಪಾಸಿಟಿವ್ ರಕ್ತದ ಗುಂಪು ಹೊಂದಿದ್ದರು. ಹೀಗಾಗಿ ಶಸ್ತ್ರಚಿಕಿತ್ಸೆಯು ತಂಡಕ್ಕೆ ಸವಾಲಾಗಿ ಪರಿಣಮಿಸಿತ್ತು ಎಂದು ತಿಳಿಸಿದರು. ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಮೊದಲ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಈ ತರಹದ ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಹೇಳಿದರು.ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ, ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ ರೆಡ್ಡಿ, ಡಾ.ಚೇತನ ಹೊಸಕಟ್ಟಿ, ಶಿವಾನಂದ ಹೊನಕೇರಿ ಸೇರಿದಂತೆ ವೈದ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.

Share News

About BigTv News

Check Also

SSLC PUC ಉದ್ಯೋಗ ಸುದ್ದಿ

ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ, ಜಾನುವಾರು ಸಾಕಣೆ ಹೂಡಿಕೆ ಸಹಾಯಕ ಮತ್ತು ಜಾನುವಾರು …

Leave a Reply

Your email address will not be published. Required fields are marked *

You cannot copy content of this page