ಹುಬ್ಬಳ್ಳಿ: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ರೌಡಿಗಳನ್ನು ಪೋಷಿಸುವ ಹಾಗೂ ದೇಶವನ್ನು ಗೂಂಡಾ ರಾಜ್ಯವನ್ನಾಗಿ ಮಾಡುವ ಸರ್ಕಾರ. ಕ್ರಿಮಿನಲ್ ಗಳನ್ನು ಪ್ರಧಾನಮಂತ್ರಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಕೈ ಮುಗಿಯುವಂತೆ ಮಾಡಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಬಿಜೆಪಿ ಸುಮಾರು 23 ಸಾವಿರ ರೌಡಿಗಳಿಗೆ ಕ್ಲೀನ್ ಚೀಟ್ ಕೊಡುವ ಮೂಲಕ ದೇಶವನ್ನು ಹಾಳು ಮಾಡಲು ಹೊರಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪೈಟರ್ ರವಿ ಎಂಬುವಂತ ರೌಡಿಯನ್ನು ಪ್ರಧಾನಮಂತ್ರಿಯವರ ಸ್ವಾಗತಕ್ಕೆ ನಿಲ್ಲಿಸುತ್ತಾರೆ. ಪ್ರಧಾನಮಂತ್ರಿ ಅವರು ಇಂತಹ ಕ್ರಿಮಿನಲ್ ಗಳಿಗೆ ಕೈ ಮುಗಿಯುತ್ತಾರೆ ಎಂದರೇ ಏನು ಅರ್ಥ. ಇದು ರೌಡಿಗಳ ಸರ್ಕಾರ ಎಂದು ತೋರಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಬಿಜೆಪಿ ಪ್ರಸ್ತುತ ಪಡಿಸುತ್ತಿದೆ ಎಂದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬದಲಿಗೆ ಜನರ ಕ್ಷಮೆ ಕೇಳುವ ಯಾತ್ರೆ ಮಾಡಬೇಕಿತ್ತು. ಈಗಾಗಲೇ ಜನರಿಗೆ ಮೋಸ ಮಾಡಿದೆ. 40% ಕಮೀಷನ್, ಭ್ರಷ್ಟಾಚಾರ, ಬೆಲೆ ಏರಿಕೆ, ಸುಳ್ಳು ಭರವಸೆ ನೀಡಿ ಜನರನ್ನು ಮೋಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜನರನ್ನು ಕ್ಷಮೆ ಕೇಳುವ ಯಾತ್ರೆ ಮಾಡಬೇಕಿತ್ತು ಎಂದು ಅವರು ಹೇಳಿದರು.
ಇನ್ನೂ ಒಬ್ಬ ಎಂಎಲ್ಎ ಮನೆಯಲ್ಲಿ ಎಂಟು ಕೋಟಿ ಹಣ ಪತ್ತೆಯಾಗಿದೆ. ಒಬ್ಬ ಎಂಎಲ್ಎ ಯನ್ನು ಅರೆಸ್ಟ್ ಮಾಡಲು ಶಕ್ತಿ ಇಲ್ಲದಂತ ಏಕೈಕ ಬದ್ಧತೆ ಇಲ್ಲದೇ ಇರುವ ಸರ್ಕಾರ ಬಿಜೆಪಿ ಸರ್ಕಾರವಾಗಿದೆ. ಬಿಜೆಪಿಯವರಿಗೆ ಜನರ ಬಳಿಯಲ್ಲಿ ಮತ ಕೇಳುವ ನೈತಿಕತೆಯೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.