Breaking News

ಸಿದ್ದರಾಮಯ್ಯಗೆ ಕ್ಷೇತ್ರ ಸಿಗದಂತಹ ಪರಿಸ್ಥಿತಿ-ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈಗ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಕ್ಷೇತ್ರವೇ ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು, ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ವ್ಯಂಗ್ಯವಾಡಿದರು.ಸಿದ್ದರಾಮಯ್ಯನವರಿಗೇ ಕ್ಷೇತ್ರ ಸಿಗಲಾರದಂತಹ ಸ್ಥಿತಿ ನಿರ್ಮಾಣವಾಗಿರುವಾಗ ಜನರು ಆ ಪಕ್ಷದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಿ.ಟಿ.ರವಿ ಅವರು ಲಿಂಗಾಯತರ ಬಗ್ಗೆ ಹೇಳಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರವಿ ಅವರು ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಬೋಗಸ್ ಇದೆ. ಈಗಾಗಲೇ ಅದರ ಬಗ್ಗೆ ಫ್ಯಾಕ್ಟ್ ಚೆಕ್ ಆಗಿದೆ. ಕಾಂಗ್ರೆಸ್‌ನವರು ಇಂತಹ ಸುಳ್ಳು ವೀಡಿಯೋ ಬಿಟ್ಟು ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಅನೇಕ ಮಾಧ್ಯಮಗಳಲ್ಲಿ ಅದು ಫೇಕ್ ಎಂದು ಬಂದಿದೆ. ಅದರ ಬಗ್ಗೆ ಚರ್ಚೆ ಅನಗತ್ಯ. ಏಕೆಂದರೆ ಸಿ.ಟಿ.ರವಿ ಪ್ರಬುದ್ಧ ರಾಜಕಾರಣಿ. ಅವರು ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅವರು ಈ ರೀತಿ ಹೇಳಲು ಸಾಧ್ಯವೇ ಇಲ್ಲ. ನಮಗೆ ಎಲ್ಲ ಸಮುದಾಯದ ಬಗ್ಗೆ ಗೌರವ ಇದೆ. ವಿಶೇಷವಾಗಿ ಲಿಂಗಾಯತರು ಹಾಗೂ ಬಸವಣ್ಣನವರ ಬಗ್ಗೆ ಗೌರವವಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಅವರು ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲ್ಲದ ಅವರ ಮೇಲೆ ಇಂತಹ ಊಹಾ ಪೋಹಗಳು ಮೊದಲಿನಿಂದಲೂ ಇವೆ.ಅವರು ಬೆಳಿಗ್ಗೆ ನನ್ನ ಜೊತೆ ಮಾತನಾಡಿ ದ್ದಾರೆ. ಅದೆಲ್ಲವೂ ಸಂಪೂರ್ಣ ಸುಳ್ಳು. ಅವರು ಯಾರನ್ನೂ ಭೇಟಿಯಾಗಿಲ್ಲ ಎಂದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *