ಹುಬ್ಬಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ಸಿಗರು ತಮ್ಮ ಆಡಳಿತ ರಾಜ್ಯಗಳಲ್ಲಿ ಎಲ್ಲೆಲ್ಲಿ ಆಶ್ವಾಸನೆ ನೀಡಿದಂತೆ ಯೋಜನೆ ಅನುಷ್ಠಾನಗೊಳಿಸಿದ್ದಾರೆ ಎಂಬುವದರ ಬಗ್ಗೆ ಶೀಘ್ರವೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಅಧಿಕಾರದ ಹತಾಶೆಯಿಂದ ಆಗಲಾರದ ಬೋಗಸ ಗ್ಯಾರಂಟಿ ಕಾರ್ಡಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದು ಚುನಾವಣೆಗಾಗಿ ಮಾಡುತ್ತಿರುವ ಬೋಗಸ್ ಕಾರ್ಡ್ ಸರಣಿಯಾಗಿದೆ. ಜನರು ಇದನ್ನು ನಂಬುವುದಿಲ್ಲ ಎಂದರು.
ರಾಹುಲ್ ಗಾಂಧಿಯ ಬಗ್ಗೆ ಮಾತನಾಡಿದ ಅವರು, ದೇಶದ ಬಗ್ಗೆ ಅವರಿಗೆ ಎಷ್ಟು ಪ್ರೀತಿ ಇದೆ ಎಂಬುವುದು ಎಲ್ಲರಿಗೂ ಗೊತ್ತು. ರಾಜ್ಯದ ಬಗ್ಗೆ ಅವರು ಏನು ಮಾತನಾಡುತ್ತಾರೆ. ಹೊರ ದೇಶಕ್ಕೆ ಹೋದಾಗ ನಾಡಿನ ಬಗ್ಗೆ ಕೀಳಾಗಿ ಮಾತನಾಡುತ್ತಾರೆ. ಇವರಿಗೆ ದೇಶದ ಬಗ್ಗೆ ಕಿಂಚಿತ್ತೂ ಕಾಳಜಿಯಾಗಲಿ ಎಂದು ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉರಿಗೌಡ, ನಂಜೆಗೌಡ ಆಧಾರ ಕಾರ್ಡ್ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ಬಗ್ಗೆ ಸತ್ಯ ಸಂಶೋಧನೆ ಆಗಲಿ. ಆಗ ಎಲ್ಲವೂ ಹೊರಬೀಳಿಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.