ಹುಬ್ಬಳ್ಳಿ: ಮುಂದಿನ ವಿಧಾನಸಭಾ ಚುನಾವಣೆಗೆ ಆಮ್ ಆತ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಧಾರವಾಡ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಅನಂತಕುಮಾರ್ ಬುಗಡಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ವಿಕಾಸ ಸೊಪ್ಪಿನ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರಕ್ಕೆ ಬಸವರಾಜ ತೆರದಾಳ, ಕಲಘಟಗಿ ಕ್ಷೇತ್ರಕ್ಕೆ ಮಂಜುನಾಥ ಜಕ್ಕಣ್ಣನವರ ಅವರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದರು.
ಇನ್ನೂ ಸಾಕಷ್ಟು ಸಾರ್ವಜನಿಕರ ಭರವಸೆಯ ಮೂಲಕವೇ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಜನರು ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





