Breaking News

ಕುಡಿಯುವ ನೀರಿಗಾಗಿ ಪರದಾಟ, ಬೀದಿಗಳಿದು ಪ್ರತಿಭಟನೆ

ಧಾರವಾಡ: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ೧೬ ದಿನಗಳು ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.
ಕುಡಿಯಲು ನೀರು ಸರಬರಾಜು ಮಾಡುವವರೆಗೂ ರಸ್ತೆ ತಡೆ ನಡೆಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ಸಾರ್ವಜನಿಕರು ಪಿಬಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ಮಾಡಿದ್ದರಿಂದ ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಅದರಿಂದಾಗಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ನೂರಾರು ವಾಹನಗಳು ರಸ್ತೆಯ ಮೇಲೆ ಕಾಯ್ದು ನಿಂತವು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಪೊಲೀಸರ ಮನವಿಗೆ ಸ್ಪಂದಿಸದ ಪ್ರತಿಭಟನಾಕಾರರು, ನೀರು ಬಿಡುವವರೆಗೂ ರಸ್ತೆತಡೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಈಗ ತಾನೆ ಬೇಸಿಗೆ ಆರಂಭವಾಗಿದ್ದು ಜನರು ಕುಡಿಯುವ ನೀರಿಗೆ ಪರದಾಡು ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಕಾರಣ ಖಾಸಗಿ ಕಂಪನಿ. ಹುಬ್ಬಳ್ಳಿ ಧಾರವಾಡ ಅವಳಿ ನಗರದ‌‌ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ಜಲಮಂಡಳಿಯಿಂದ ಖಾಸಗಿ ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿ ಪಾಲಿಕೆ ಕೈತೊಳೆದುಕೊಂಡಿತ್ತು. ಈ ಪ್ರಕ್ರಿಯೆ ನಡೆದು ಆರೇಳು ತಿಂಗಳುಗಳೇ ಕಳೆದಿದೆ. ಆದ್ರೇ ನೀರು ಪೂರೈಸುವ ಜವಾಬ್ದಾರಿ ಹೊತ್ತ ಎಲ್‌ಆಂಡ್ ಟಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ. ಹೊಡೆದ ಪೈಪ್ ಲೈನ್ ಗಳ ದುರಸ್ತಿ ಮಾಡುತ್ತಿಲ್ಲ. ಈಗಾಗಲೇ ಜಲಮಂಡಳಿ ಮೂಲಕ ನೀರು ಪೂರೈಸುತ್ತಿದ್ದ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಟ್ಟಿದೆ. ಆದ್ರೇ ಆ ಜಾಗಕ್ಕೆ‌ ಸಮರ್ಪಕವಾದ ಸಿಬ್ಬಂದಿ ನೇಮಕಗೊಂಡಿಲ್ಲ ಇದರಿಂದ ನೀರು ಪೂರೈಕೆ ನೂರೆಂಟು ವಿಘ್ನ ಎದುರಾಗುತ್ತಲೇ‌ ಇದೆ. ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಆದ್ರೇ ಜನರ‌ ಮನೆಗಳ ನಲ್ಲಿಯಲ್ಲಿ ನೀರು ಮಾತ್ರ ಬರ್ತೀಲ್ಲ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *