Breaking News

ಈದ್ಗಾ ಮೈದಾನಕ್ಕೆ ಮರುನಾಮಕರಣ ತಿರಸ್ಕಾರಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಅಕಿದ್ದ ಪಿಐಎಲ್ ಅರ್ಜಿಯನ್ನು ಹೈ ಕೋರ್ಟ್ ತಿರಸ್ಕಾರಗೊಳಿಸಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ಹುಬ್ಬಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹುಸೇನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಪಾಲಿಕೆ ಪರವಾಗಿ ವಾದ ಮಂಡಿಸಿದ ಎಸ್.ಎಸ್.ಮಹೇಂದ್ರ, ಮೈದಾನ ಪಾಲಿಕೆಯ ಆಸ್ತಿ ಇದರ ಮೇಲೆ ಸಂಪೂರ್ಣ ಹಕ್ಕು ಪಾಲಿಕೆಗೆ ಇದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು, ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ, ಇತ್ತೀಚೆಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿದೆ. ನಂತರ ಆ ಕುರಿತು ಪ್ರಕಟಣೆ ಹೊರಡಿಸಲಾಗಿದೆ.30 ದಿನಗಳ ಒಳಗಾಗಿ ತಕರಾರರು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ ಎಂದು ವಾದ ಮಂಡಿಸಿದ್ದರು. ಇನ್ನೂ ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ವಿರೋಧ ಎಐಎಂಐಎಂ ವ್ಯಕ್ತಪಡಿಸಿದ್ದು,ಹುಬ್ಬಳ್ಳಿ
ಧಾರವಾಡ ಪಾಲಿಕೆ ಕಚೇರಿ ಎದುರು ಎಐಎಂಐಎಂ ಕಾರ್ಯಕರ್ತರು ಇತ್ತೀಚೆಗೆ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ಸಹ ನಡೆಸಿದ್ದರು.
ಹುಬ್ಬಳ್ಳಿಯ ಈದ್ದಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಪಿಸಿ, ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿದ್ದರು.

Share News

About BigTv News

Check Also

Featured Video Play Icon

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ …

Leave a Reply

Your email address will not be published. Required fields are marked *

You cannot copy content of this page