ಹುಬ್ಬಳ್ಳಿ: ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ಮೋದಿ ಬರುತ್ತಾರೆ. ಮಾರ್ಚ್ 26 ಕ್ಕೆ ಮತ್ತೇ ಅಮಿತ್ ಶಾ ಪ್ರವಾಸ ಮಾಡುತ್ತಾರೆ ಎಂದರು.
ರಾಹುಲ್ ಗಾಂಧಿ ರಾಜ್ಯ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಹುಲ್ ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದದ್ದಕ್ಕೂ ಬಹಳ ವ್ಯತ್ಯಾಸವಿದೆ. ಈ ಬಾರಿ ಅವರು ಬ್ರಿಟನ್ ವಿವಿ ಯಲ್ಲಿ ಮಾತನಾಡಿದರು. ದೇಶ, ಪ್ರಜಾಪ್ರಭುತ್ವ ವಿರೋಧಿ ಮಾತುಗಳನ್ನಾಡಿದ್ದಾರೆ. ದೇಶವ್ಯಾಪ್ತಿ ಇದರ ಬಗ್ಗೆ ಖಂಡನೆಯಾಗಿದೆ. ರಾಹುಲ್ ಗಾಂಧಿ ಮಾತಿಗೆ ಕರ್ನಾಟಕದ ಜನ ಯಾವುದೇ ಬೆಲೆ ಕೊಡಲ್ಲ. ಸಿದ್ಧರಾಮಯ್ಯ ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದರು. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ಕಾಂಗ್ರೆಸ್ ಈಡೇರಿಸಿಲ್ಲ ಎಂದು ಅವರು ಹೇಳಿದರು.
ರಾಜಾಸ್ತಾನ್, ಛತ್ತೀಸ್ ಘಡ ಮತ್ತಿತರ ಕಡೆ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಜನರನ್ನು ಯಾಮಾರಿಸುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಜಿಟಿಂಗ್ ಕಾರ್ಡ್.
ಸಿದ್ಧರಾಮಯ್ಯನವರ ವಿರುದ್ಧ ಸಾಕಷ್ಟು ಚಾರ್ಜ್ ಗಳಿವ ಲೋಕಾಯುಕ್ತದಲ್ಲಿಯೂ ದೂರಿದೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಅಂದರೆ ಇದ್ಲಿ, ಮಸಿಗೆ ಬುದ್ಧಿ ಹೇಳಿದಂತೆ ಎಂದು ಅವರು ವ್ಯಂಗ್ಯವಾಡಿದರು.
ಭಾರತದಲ್ಲಿ ಕಾಂಗ್ರೆಸ್ ಪತನ ಶುರುವಾಗಿದೆ. ರೀಡೋ ವಾಚ್ ಬಗ್ಗೆ ನ್ಯಾಯಾಂಗ ತನಿಖೆ ಮಾಡುತ್ತಿದ್ದೇವೆ. ವಿಪಕ್ಷಗಳ 59 ಪ್ರಕರಣಗಳ ಪೈಕಿ ಕೆಲವನ್ನು ಲೋಕಾ ಯುಕ್ತಕ್ಕೆ ಕೊಟ್ಟಿದ್ದೇವೆ. ಕೆಲವನ್ನು ಮುಂದಿನ ದಿನಗಳಲ್ಲಿ ಕೊಡುತ್ತೇವೆ ಎಂದು ಅವರು ಹೇಳಿದರು.
ಬಿಜೆಪಿ ಜನರ ಭಾವನಾತ್ಮಕ ವಿಚಾರಗಳ ಜೊತೆ ಆಟವಾಡ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಇತಿಹಾಸವನ್ನು ಮರೆಮಾಚುವ ಕೆಲಸ ನಡೆದಿದೆ
ಉರಿಗೌಡ ಅಂತ ಹೇಳಲ್ಲ. ಹಲವಾರು ಪ್ರಕರಣಗಳಲ್ಲಿ ಸತ್ಯ ಮರೆಮಾಚುವ ಕೆಲಸ ನಡೆದಿದೆ. ಅವುಗಳ ಸತ್ಯ ಹೇಳಿದರೆ ಇವರಿಗೆ ತಡೆದುಕೊಳ್ಳೋಕೆ ಆಗಲ್ಲ. ಸತ್ಯ ಶೋಧನೆ ಆದಾಗ ಎಲ್ಲವೂ ಹೊರಗೆ ಬರುತ್ತೆ, ಜಯ ಸಿಗುತ್ತದೆ ಎಂದ ಅವರು, ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ್ದು, ಅವರ ಬೇಡಿಕೆ ಈಡೇರಿಸಿದ್ದೇವೆ. ಪ್ರಮುಖ ಸಂಘಟನೆ ಮುಖಂಡರೊಂದಿಗೆ ಚರ್ಚಿಸಿ, ಬಗೆಹರಿಸಿದ್ದೇನೆ
ಅಭಿನಂದನೆ ಸಲ್ಲಿಸೊ ಜೊತೆಗೆ, ಮುಷ್ಕರ ವಾಪಸ್ ಪಡೆದಿದ್ದಾರೆ. ಪ್ರಮುಖ ಸಂಘಟನೆ ಜೊತೆ ಮಾತನಾಡಿದ್ದು, ಮುಷ್ಕರಕ್ಕೆ ಹೋಗೋ ಪ್ರಶ್ನೆಯೇ ಇಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





