ಹುಬ್ಬಳ್ಳಿ- ಧಾರವಾಡ: ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಫೈಟ್ ನಡೆದಿದ್ದು, ಜಿಲ್ಲಾ ಕಮಿಟಿ ಜೊತೆ ಚರ್ಚಿಸದೆ ಮೋಹನ್ ಲಿಂಬಿಕಾಯಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.ಲಿಂಬಿ ಕಾಯಿ ಕಾಂಗ್ರೆಸ್ ಸೇರ್ಪಡೆ ಕುರಿತು ಮುಂಚೆಯೇ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರು ಯಾವುದೇ ಷರತ್ತು ಇಲ್ಲದೆ ಬಂದಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಹೇಳಿದ್ದಾರೆ.
ಅರವಿಂದ ಬೆಲ್ಲದ್‌ರನ್ನು ಸೋಲಿಸಲು ಉತ್ತಮ ಅಭ್ಯರ್ಥಿ ಕೊಡಿ ಎಂದು ಅಲ್ಲಿನ ಮತದಾರರು, ಕಾರ್ಯಕರ್ತರು ಕೇಳುತ್ತಿದ್ದಾರೆ. ಮೂಲ ಕಾಂಗ್ರೆಸ್ ನವರಿಗೆ ಟಿಕೆಟ್ ಕೊಡಿ ಎನ್ನುವುದು ನಮ್ಮ ಆಗ್ರಹ ಎಂದರು
ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಆಗಿರುವ, ಮತ್ತು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮೋಹನ್ ಲಿಂಬಿಕಾಯಿ ಸ್ಪರ್ಧೆಗೆ ಮೂಲ ಕಾಂಗ್ರೆಸ್ಸಿಗರ ವಿರೋಧ ಉಂಟಾಗಿದ್ದು, ಮೂಲಕ ಕಾಂಗ್ರೆಸ್ಸಿಗರ ವಿರೋಧದ ಬಿಸಿ ತಟ್ಟಿದೆ.