Breaking News

ಕಾರಿನಲ್ಲಿ ಕಂತೆ ಕಂತೆ ನೋಟುಗಳು: ವಶಕ್ಕೆ ಪಡೆದ ಪೊಲೀಸರು

ಧಾರವಾಡ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ಹಣವನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕೋಡಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಈ ವಾಹನ ತೇಗೂರು ಚೆಕ್ ಪೋಸ್ಟ್ ಬಳಿ ಬರುತ್ತಿದ್ದಂತೆ ಪೊಲೀಸರು ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿ ಹಣ ಪತ್ತೆಯಾಗಿದೆ.

ಚಿಕ್ಕೋಡಿ ಮೂಲದ ಸಂಜು ಹಿರೇಮಠ ಎಂಬಾತ ಈ ಕಾರು ತೆಗೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಆತ ಹುಬ್ಬಳ್ಳಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದಾಗಿ ತಿಳಿಸಿದ್ದಾನೆ.

ಸದ್ಯ ನಗದು ಹಾಗೂ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಸಂಜು ಹಿರೇಮಠನಿಗೆ ನೋಟಿಸ್ ಜಾರಿ ಮಾಡಿ ಸೂಕ್ತ ದಾಖಲೆ ನೀಡುವಂತೆ ತಿಳಿಸಿದ್ದಾರೆ. ಈ ಸಂಬಂಧ ಗರಗ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *