ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇಂದು ಬೆಳಗ್ಗೆ ಲೋಕಸಭೆ ಅಧಿವೇಶನಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
