Breaking News

ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರರ ಸಾವು

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಬೈಪಾಸ್ ರಸ್ತೆ ಕಿಲ್ಲರ್ ಬೈಪಾಸ್ ಎಂದೇ ಹೆಸರು ಪಡೆದಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಒಂದಿಲ್ಲೊಂದು ಅಪಘಾತ ನಡೆದು ವಾಹನ ಸವಾರರು ಸಾವನ್ನಪ್ಪುತ್ತಲೇ ಇರುತ್ತಾರೆ.

ಇದೀಗ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಭೀಮರಾವ್ ಗೋಸಾವಿ (38) ಹಾಗೂ ಏಕನಾಥ ಗೋಸಾವಿ (40) ಎಂಬುವವ ಸಾವನ್ನಪ್ಪದ್ದಾರೆ.

ಬೈಪಾಸ್ ರಸ್ತೆಯ ಇಟಿಗಟ್ಟಿ ಬಳಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರು ಧಾರವಾಡ ಲಕ್ಷ್ಮೀಸಿಂಗನಕೇರಿ ನಿವಾಸಿಗಳು ಎಂದು ಗೊತ್ತಾಗಿದೆ. ಇವರು ಸ್ಟೋವ್ ರಿಪೇರಿ ಮಾಡುವ ಕಾರ್ಮಿಕರಾಗಿದ್ದು, ಬೆಳಿಗ್ಗೆ ಕೆಲಸದ ನಿಮಿತ್ತ ಹೋಗುವಾಗ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿ ಕೊಂಡಿದ್ದಾರೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *