ಹುಬ್ಬಳ್ಳಿ : ಬಿ.ಆರ್.ಟಿ.ಎಸ್ ರಸ್ತೆ ದಾಟುತ್ತಿದ್ದ ಯುವಕನೋರ್ವನನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬಿ.ಆರ್.ಟಿ.ಎಸ್ (ಚಿಗರಿ) ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡ ಘಟನೆ ನಗರದ ವಿದ್ಯಾನಗರದ ಜೆ.ಜಿ. ಕಾಮರ್ಸ್ ಕಾಲೇಜ್ ಬಳಿ ನಡೆದಿದೆ.
ಘಟನೆಯಲ್ಲಿ ಯುವಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತಂತೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
