Breaking News

ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ- ಸಿಎಂ

ಹುಬ್ಬಳ್ಳಿ: ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟರು.

ನಗರದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ, ಕಾಂಗ್ರೆಸ್ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ ಸಮಿತಿ ರಚಿಸಿ, ಕಾನೂನು ಪ್ರಕಾರ ಮಾಡಿದ್ದೇವೆ. ನಾವು ಮಾಡೋಕೆ ಆಗದ್ದನ್ನು ಬಿಜೆಪಿಯವರು ಮಾಡಿದ್ದಾರೆ ಅಂತಾ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅದ್ಯಾವುದಕ್ಕೂ ಬೆಲೆ ಇಲ್ಲ. ಅವರು ಯಾವಾಗಲೂ ಎಸ್‌ಸಿ, ಎಸ್‌ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು ಎಂದರು.

ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಎಂದು ಕೊಂಡಿದ್ದರು. ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆ ಕಾರಣ. ಆ ಜನಾಂಗಕ್ಕೆ ನ್ಯಾಯ ಕೊಡಿಸೋವರೆಗೂ ವಿಶ್ರಮಿಸಲ್ಲ ಎಂದರು.

ಇವರೆಲ್ಲ ಜೇನುಗೂಡಿಗೆ ಕೈಹಾಕ್ತಿದಾರೆ ಅಂತ ಹೇಳಿದ್ದರು. ಜೇನುಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು. ನಾನು ಜೇನುಗೂಡಿಗೆ ಕೈ ಹಾಕ್ಕೇನೆ, ಜೇನು ನೊಣದಿಂದ ಕಚ್ಚಿಸಿಕೊಂಡರೂ ಪರ್ವಾಗಿಲ್ಲ, ಆ ಜನಾಂಗಕ್ಕೆ ಜೇನಿನ ಹನಿಯನ್ನು ಕೊಡಿಸಲು ಸಿದ್ಧ ಅಂತ ಹೇಳಿದ್ದೆ ಈಗ ಅದನ್ನು ಮಾಡಿದ್ದೇನೆ ಎಂದರು.

ಮುಸ್ಲಿಂಮರನ್ನು ಇಡಬ್ಲ್ಯುಎಸ್ ಸೇರ್ಪಡೆ ಮಾಡಿರೋ ವಿಚಾರವಾಗಿ ಮಾತನಾಡಿದ ಸಿಎಂ, ಮೊದಲು ಶೇಕಡಾ 4 ಪರ್ಸೆಂಟ್ ಮೀಸಲಾತಿ ಇತ್ತು. ಈಗ ಶೇ. 10 ರಷ್ಟು ಮೀಸಲಾತಿ ಇರೋ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತದೆ. ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ ಎಂದರು.

ಚುನಾವಣಾ ಪ್ರಕ್ರಿಯೆ ಮಹದಾಯಿ ಯೋಜನೆ ಕಾಮಗಾರಿಗೆ ತೊಡಕಾಗಲ್ಲ. ನೀತಿ ಸಂಹಿತೆ ಜಾರಿಯಾದ್ರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗೋ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ ಎಂದು ಮಹದಾಯಿ ಕುರಿತು ಸಿಎಂ ಹೇಳಿದರು.

ಇನ್ನು, ಚುನಾವಣೆ ಘೋಷಣೆ ಆದ ನಂತರವೇ ಬಿಜೆಪಿ ಪಟ್ಟಿ ಬಿಡುಗಡೆಯಾಗುತ್ತದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ. ಇವತ್ತಿನ ಕೋರ್ ಕಮಿಟಿಯಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಚರ್ಚೆಯಾಗುತ್ತದೆ ಎಂದರು.

Share News

About BigTv News

Check Also

ಅಪರಾಧ ಕೃತ್ಯಗಳ ಸ್ಥಳಗಳ ಹಾಗೂ ನೊಂದವರನ್ನು ಭೇಟಿ ಮಾಡಿದ ಹು ಧಾ ಪೊಲೀಸ್ ಕಮೀಷನರ್…

ನೊಂದು ಬೆಂದವರಿಗೆ ಭರವಸೆಯ ನುಡಿಅನ್ಯಾಯ ಸಹಿಸಲ್ಲ …ನ್ಯಾಯ ಸಾಯಲು ಬಿಡಲ್ಲ ..ಇದು ಖಡಕ್ ಆಫಿಸರ್ ನಡೆನ್ಯಾಯಕ್ಕಾಗಿ ಕುಳಿತವರಿಗೆ ಆಪತ್ಬಾಂಧವ ನ …

Leave a Reply

Your email address will not be published. Required fields are marked *

You cannot copy content of this page