ಹುಬ್ಬಳ್ಳಿ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಎಂದು ನಾನು ಸ್ಪಷ್ಟವಾಗಿ ಹೇಳ್ತೀನಿ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ತಿರುಕನ ಕನಸು ಕಾಣ್ತೀದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಇವತ್ತು ಚುನಾವಣೆ ಘೋಷಣೆಯಾಗಿದೆ. ಮೋದಿ ಹಾಗೂ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಬಿಜೆಪಿ ಚುನಾವಣೆಗೆ ಅಣಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಪೂರಕ ವಾತಾವರಣ ಇದೆ. ಜರನಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಕಳೆದ ಎರಡು ಬಾರಿ ನಮಗೆ ಸ್ವಲ್ಪ ಕಡಿಮೆ ಸ್ಥಾನ ಬಂದಿತ್ತು.
ಬಿಜೆಪಿಗೆ 60 ರಿಂದ 70 ಸ್ಥಾನ ಎಂಬ ಡಿಕೆಶಿ ಹೇಳಿಕೆಗೆ ಶೆಟ್ಟರ್ ತಿರುಗೇಟು ನೀಡಿದ್ದು, ಡಿಕೆಶಿವಕುಮಾರ್ ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಹಾಗೇ ಹೇಳಬೇಕಾಗುತ್ತೆ ಎಂದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಇನ್ಮೇಲೆ ಗಂಭೀರವಾಗಿ ಚರ್ಚೆ ಆಗತ್ತೆ.
ಯಾರ ನಾಯಕತ್ವದಲ್ಲಿ ಚುನಾವಣೆ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡತ್ತೆ.ನಾನು 6 ಬಾರಿ ಗೆದ್ದೀದಿನಿ, ಮತ್ತೊಮ್ಮೆ ಜನ ಕೈ ಹಿಡೀತಾರೆ. ನಾನೇ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





