Breaking News

ಬಿಜೆಪಿ ವಿರುದ್ಧ ಕಾಂಗ್ರೆಸ್’ನವರು ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ- ಅಶ್ವಥ್ ನಾರಾಯಣ

ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಪಡೆಯುವುದು ಬಹಿರಂಗಗೊಂಡಿದ್ದು, ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಬೇಕು. ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ‌.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್’ನವರು 40% ಕಮಿಷನ್ ಕುರಿತಾಗಿ ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಕೂಡಾ ಹಾಕಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರುಗಳ ಮೇಲೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಮಿಷನ್ ಪಡೆದಿರುವುದು ಜಗ್ಗದಜಾಹಿರಾಗಿದೆ. ಹೀಗಿದ್ದಾಗ್ಯೂ ಈವರೆಗೆ ಕಾಂಗ್ರೆಸ್ ನಾಯಕರು ಚಕಾರ್ ಎತ್ತುತ್ತಿಲ್ಲ. ಕೂಡಲೇ ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮಾಪಣೆ ಕೇಳಬೇಕೆಂದರು.

ಈಗಾಗಲೇ ಕಾಂಗ್ರೆಸ್ ಪಕ್ಷ ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳು ಆಶ್ವಾಸನೆ ನೀಡುತ್ತಾ, ಗ್ಯಾರಂಟಿ ಕಾರ್ಡ್ ಮೂಲಕ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಅದೇ ಬಿಜೆಪಿ ಏನೂ ಹೇಳದೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ರಸ್ತೆ ರಸ್ತೆಗಳಲ್ಲಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಆಧಾರ ರಹಿತವಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ಈವರೆಗೆ ನೀಡಿಲ್ಲ. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಆಗಿದೆ ಎಂದು ಹರಿಹಾಯ್ದರು.

ಇನ್ನು ಧಾರವಾಡ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರದ ಟಿಕೆಟ್ ವಿಚಾರವಾಗಿ ಪಕ್ಷದ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹ ಸಭೆ ಕರೆಯಲಾಗಿದ್ದು, ಇವುಗಳನ್ನು ಪಕ್ಷದ ಹೈಕಮಾಂಡ್ ಗೆ ಕಳಿಸಲಾಗುವುದು. ಅಂತಿಮವಾಗಿ ಹೈಕಮಾಂಡ್ ಪಕ್ಷದ ಅಭ್ಯರ್ಥಿಗಳನ್ನು ಪಟ್ಟಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅರವಿಂದ ಬೆಲ್ಲದ್, ರವಿ ನಾಯಕ, ಭಾರತಿ ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share News

About BigTv News

Check Also

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ …

Leave a Reply

Your email address will not be published. Required fields are marked *