Breaking News

ಪರಿಶಿಷ್ಟ ಜನಾಂಗದಿಂದ ಸಿಎಂ ಬೊಮ್ಮಾಯಿಗೆ ಅಭಿನಂದನಾ ಸಮಾವೇಶ

ಹುಬ್ಬಳ್ಳಿ: ನಾಳೆ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ, ಒಳಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಕ್ಕೆ ತಂದಿದ್ದಾರೆ.‌ ಇದು ಐತಿಹಾಸಿಕ ನಿರ್ಧಾರ. ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿತ್ತು. ಐದು ವರ್ಷಕ್ಕೊಮ್ಮೆ ಅವರನ್ನ ಬಾವಿಯಿಂದ ಹೊರಗೆ ತಗೆದು ವೋಟ್ ಹಾಕಿಸಿಕೊಂಡು ಮತ್ತೆ ಬಾವಿಯೊಳಗೆ ತಳುತ್ತಿದ್ದರೆಂದು ಸಚಿವ ಸಿಸಿ ಪಾಟೀಲ್ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಆಗಿದೆ. ಹೀಗಾಗಿ ಪರಿಶಿಷ್ಟ ಜನಾಂಗದಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನಾ ಸಮಾವೇಶ ಆಯೋಜನೆ ಮಾಡಿದೆ. ಸಮಾವೇಶದಲ್ಲಿ ಒಂದು ಲಕ್ಷ ಜ‌ನ ಸೇರುವ ನಿರೀಕ್ಷೆ ಇದೆ ಎಂದರು.

ಮೀಸಲಾತಿ ಹೆಚ್ಚಳ ವಿಚಾರ ಚುನಾವಣಾ ಸರಕು ಆಯ್ತಾ.? ಎಂಬ ಪ್ರಶ್ನೆಗೆ, ಅಚ್ಚರಿ ಮೂಡಿಸಿದ ಸಚಿವ ಸಿಸಿ ಪಾಟೀಲರ ಹೇಳಿಕೆ. ನಮ್ಮ ಮುಖ್ಯಮಂತ್ರಿಗಳು ಮೀಸಲಾತಿ ನೀಡಿದ್ದಾರೆ. ಕಮಲಕ್ಕೆ ವೋಟ್ ಹಾಕೋದರ ಮೂಲಕ ನಮ್ಮ ಜನ ಖುಣ ತೀರಸಬೇಕು. ವೀರಶೈವ ಲಿಂಗಾಯತರು, ಒಕ್ಕಲಿಗರು, ದಲಿತರು ಇವಿಎಂ ಮಷಿನಲ್ಲಿ ಕಮಲಕ್ಕೆ ಮತ ಒತ್ತಬೇಕು. ಕಮಲಕ್ಕೆ ಮತ ಒತ್ತಿ ಖುಣ ತೀರಸಬೇಕು ಎಂದ ಸಿಸಿ ಪಾಟೀಲ್. ನೂರಕ್ಕೆ ನೂರು ನಮಗೆ ಮತ ಹಾಕ್ತಾರೆ. ಮೀಸಲಾತಿ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡರಾ ಸಿಸಿ ಪಾಟೀಲ್. ಪರೋಕ್ಷವಾಗಿ ಮೀಸಲಾತಿ‌ ಕೊಟ್ಟಿದ್ದೇವೆ ನಮಗೆ ಮತ ಹಾಕಬೇಕೆಂದ ಸಿಸಿ ಪಾಟೀಲ್. 2023ರ ಚುನಾವಣೆಯಲ್ಲಿ ಮತ ಹಾಕೋ ಮೂಲಕ ಬಸವರಾಜ ಬೊಮ್ಮಾಯಿಗೆ ಸನ್ಮಾನ ಮಾಡಲಾಗುವುದು. ಮಾಲೇ ಹಾಕೋದಕ್ಕಿಂತ ಮತ ಹಾಕಬೇಕು ಎಂದ ಸಿಸಿ ಪಾಟೀಲ್. ಉಪಕಾರಕ್ಕೆ ಕೃತಜ್ಞತೆ ಸಲ್ಲಿಸುವ ಸಂಪ್ರದಾಯ ಇದೆ. ಹಿಂದೂ ಸಮಾಜ ಉಪಕಾರ ತಗೊಂಡಿದ್ದೀವಿ, ಮತ ಹಾಕೋದರ ಮೂಲಕ ಕೃತಜ್ಞತೆ ಸಲ್ಲಿಸಬೇಕು ಎಂದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *