ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 400 ಮೊಬೈಲ್ ಹಸ್ತಾಂತರ ಮಾಡಲಾಯಿತು.
ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕ್ಯಾಂಪಸ್ ಆವರಣದಲ್ಲಿ ಆಯೋಜಿಸಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೆಶಕ ಪ್ರವೀಣ ಸೂದ್ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
400 ಮೊಬೈಲ್ ಹಸ್ತಾಂತರ ಮಾಡಿದ ಪೊಲೀಸ್ ಅಧಿಕಾರಿಗಳು, ಇ-ಸ್ಪಂದನ, ಇ.ವಿ.ಆರ್.ಎಸ್ ಹಾಗೂ ಲೋಕಸ್ಪಂದನ ಮೂಲಕ ಮೊಬೈಲ್ ಪತ್ತೆ ಹಚ್ಚಿದ ಪೊಲೀಸ್ ಸಿಬ್ಬಂದಿ ಹುಧಾ ಪೊಲೀಸ್ ಕಮೀಷನರ್ ರಮಣಗುಪ್ತಾ, ಎಸ್ಪಿ ಲೋಕೇಶ್ ಜಗಲಾಸರ್, ಡಿಸಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತರಾದ ಗೋಪಾಲಕೃಷ್ಣ ಅವರ ಉಪಸ್ಥಿತಿಯಲ್ಲಿಯೇ ವಿತರಣೆ ಮಾಡಲಾಯಿತು.

bigtvnews | Hubli Dharwad News | Kannada News | Karnataka News Hubli News | News In Hubli | Local news





