Breaking News

ಸಾಮಾಜಿಕ ಜಾಲತಾಣದ ವಾರ್ ಬಗ್ಗೆ ಮಾತನಾಡಿರುವ ಶಾಸಕ ಅಮೃತ ದೇಸಾಯಿ

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಹೆಸರು ಅಂತಿಮಗೊಳ್ಳುತ್ತಿದ್ದಂತೆ ಶಾಸಕ ಅಮೃತ ದೇಸಾಯಿ ವೇದಿಕೆ ಕಾರ್ಯಕ್ರಮವೊಂದರಲ್ಲಿ ಹಾಕಿದ್ದ ಬಹಿರಂಗ ಸವಾಲಿಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ತಿರುಗೇಟು ಕೊಡುತ್ತಿದ್ದಾರೆ.

ಬಾರೋ ಅಂತ ಕರೆದವರು ಈಗ ಎಲ್ಲಿದ್ದೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಾಮಾಜಿಕ ಜಾಲತಾಣದ ವಾರ್ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಶಾಸಕ ಅಮೃತ ದೇಸಾಯಿ, ಈಗಲೂ ಅವರಿಗೆ ಬಾರೋ ಅಂತಲೇ ಕರೆಯುತ್ತೇನೆ. ಅವರು ಬಂದಾದ್ರೂ ಬರಲಿ, ಕಾಂಗ್ರೆಸ್‌ನವರು ಧಾರವಾಡ ಗ್ರಾಮೀಣ ಕ್ಷೇತ್ರವನ್ನು ಗೆಲ್ಲುವ ತಿರುಕನ ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯನವರು ಬಂದು ಇಲ್ಲಿ ಚುನಾವಣೆಗೆ ನಿಂತರೂ ಬಿಜೆಪಿಯನ್ನು ಗೆಲ್ಲಿಸುತ್ತೇವೆ. ಅದಕ್ಕೆ ನಮ್ಮ ತಂಡ ಸಿದ್ಧವಿದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ನವರೂ ಪೋಸ್ಟ್ ಹಾಕುತ್ತಿರುತ್ತಾರೆ ಅದಕ್ಕೆ ನಮ್ಮವರೂ ಪ್ರತ್ಯುತ್ತರ ಕೊಡುತ್ತಿರುತ್ತಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ನಾವು ಮತ್ತೊಮ್ಮೆ ಕಮಲವನ್ನು ಅರಳಿಸಿಯೇ ತೀರುತ್ತೇವೆ ಎಂದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *