Breaking News

Choclate ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ….

ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು.

ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು.

ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ ಬೇಸತ್ತು ಪತ್ನಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎಂದಿನಂತೆ ಸಂಜೆ ಕೆಲಸ ಮುಗಿಸಿ ಹೊರಡುವಾಗ ಪತಿ ನಂದಿನಿಗೆ ಕರೆ ಮಾಡಿದ್ದಾರೆ. ಈ ವೇಳೆ ಪತ್ನಿ ಕರೆ ಸ್ವೀಕರಿಸಲಿಲ್ಲ. ಮನೆಗೆ ಬಂದು ನೋಡಿದಾಗ ನೇಣು ಹಾಕಿಕೊಂಡಿರೋದು ಬೆಳಕಿಗೆ ಬಂದಿದೆ.

ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆ Police Station ಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *