ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು.ಜಗದೀಶ್ಶೆ
ಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ,

ವಿರೋಧ ಪಕ್ಷದ ನಾಯಕರಾಗಿ, ಸಿಎಂ ಆಗಿ ಕೂಡ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಇಲ್ಲಿರುವ ಒಬ್ಬ ಸಣ್ಣ ಹುಡುಗನನ್ನು ಕೇಳಿದರೂ ಜಗದೀಶ್ ಶೆಟ್ಟರ್ ಬಗ್ಗೆ ಹೇಳುತ್ತಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವ ಜನನಾಯಕನಿಗೆ ಟಿಕೆಟ್ ಸಿಗುವುದು ಖಂಡಿತ ಎಂದರು.ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಅವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡುವುದು ನಮ್ಮ ಉದ್ದೇಶ ಈ ನಿಟ್ಟಿನಲ್ಲಿ ನಾವೆಲ್ಲರೂ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದರು.ಎಸ್.ಎಸ್.ಕೆ ಸಮಾಜದಿಂದ ಕೂಡ ಯಾವುದೇ ರೀತಿಯಲ್ಲಿ ವಿರೋಧವಿಲ್ಲ. ಎಲ್ಲರೂ ಕೂಡ ಜಗದೀಶ್ ಶೆಟ್ಟರ್ ಅವರಿಗೆ ಬೆಂಬಲ ಸೂಚಿಸುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

