Breaking News

ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ

ಹುಬ್ಬಳ್ಳಿ: ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಮಂಜುಳಾ ಚವ್ಹಾಣ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ. ಸಂಗಮೇಶ ಬಂಗಾರಿಮಠ, ಕಾರ್ಮಿಕ ಇಲಾಖೆಯ ಅಧಿಕಾರಿ ಅಶೋಕ ಒಡೆಯರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *