Breaking News

ನನ್ನ ಕಾರ್ಯಕರ್ತರೆ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ-ವೀರಭದ್ರಪ್ಪ ಹಾಲಹರವಿ

ಹುಬ್ಬಳ್ಳಿ: ನಗರದಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ ಅವರು, ನಾನು ಭವಿಷ್ಯವಾಣಿ ನೋಡಿ ನಾಮಪತ್ರ ಸಲ್ಲಿಸುತ್ತಿಲ್ಲ. ನನ್ನ ಕಾರ್ಯಕರ್ತರೆ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದು, ಜೆಡಿಎಸ್ ಪಕ್ಷಕ್ಕೆ ಜನ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು.

ಇನ್ನೂ ಎರಡು ದಿನಗಳ ನಂತರ ಬಿ ಫಾರ್ಮ್ ನೊಂದಿಗೆ ಮತ್ತೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ವೇಳೆ ಪತ್ನಿ ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದು ,ನಾಮಪತ್ರ ಸಲ್ಲಿಕೆ ನಂತರ ಹುಬ್ಬಳ್ಳಿಯ ಆರಾಧ್ಯ ದೈವ ಶ್ರೀ ಸಿದ್ಧಾರೂಢರ ಮಠಕ್ಕೆ ತೆರಳಿ ಅಲ್ಲಿಂದ ಪ್ರಚಾರ ಕಾರ್ಯ ಆರಂಭಿಸುತ್ತೇನೆ. ಈ ಮೂಲಕ ಮತ್ತೊಮ್ಮೆ ನಾನು ಜನಬೆಂಬಲದೊಂದಿಗೆ ಜಯಗಳಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ್ ಹುಣಸಿಮರದ ಹಾಲಹರವಿ ಪತ್ನಿ ಸೇರಿದಂತೆ ಉಪಸ್ಥಿತರಿದ್ದರು.

Share News

About BigTv News

Check Also

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ …

Leave a Reply

Your email address will not be published. Required fields are marked *