ಹುಬ್ಬಳ್ಳಿ: ರಾಣಿ ಚೆನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತ ಹುಬ್ಬಳ್ಳಿ, ತಾಲೂಕು ಸ್ವೀಪ್ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವತಿಯಿಂದ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮತದಾನದ ಕುರಿತಾದ ಘೋಷಣೆಗಳನ್ನು ಕೂಗುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ. ಸಂಗಮೇಶ ಬಂಗಾರಿಮಠ, ಕಾರ್ಮಿಕ ಇಲಾಖೆಯ ಅಧಿಕಾರಿ ಅಶೋಕ ಒಡೆಯರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.

bigtvnews | Hubli Dharwad News | Kannada News | Karnataka News Hubli News | News In Hubli | Local news





