ಹುಬ್ಬಳ್ಳಿ: ಈವರೆಗೂ ಬಿಜೆಪಿಯು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿ ನಡೆಯ ನಡುವೆ ಮಾಜಿ ಸಿಎಂ, ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ.
ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಜದೀಶ್ ಶೆಟ್ಟರ್, ಸದ್ಯ ಸಭೆ ಕರೆದಿದ್ದೇನೆ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಸಭೆಯಲ್ಲಿ ಬೇರೆ ಬೇರೆ ಭಾಗದಿಂದ ನಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳು ಪಾಲ್ಗೊಳ್ಳುವವರಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಪ್ರಕಟ ಮಾಡುವೆ’ ಎಂದು ತಿಳಿಸಿದ್ದಾರೆ.
ಈ ಮೂಲಕ ಜಗದೀಶ್ ಶೆಟ್ಟರ್ ಅವರು ಇಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರಾ ಎಂಬ ಪ್ರಶ್ನೆ ಎದ್ದಿದ್ದು, ಎಲ್ಲವನ್ನೂ ಕಾದು ನೋಡಬೇಕಿದೆ.