ಹುಬ್ಬಳ್ಳಿ: ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ.
ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ. ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ. ಅಪೂರ್ಣ ಕೆಲಸ ಪರಿಪೂರ್ಣ ಮಾಡಲು ಮತ್ತೊಂದು ಅವಕಾಶ ಕೊಡಬೇಕು. ಸಾಯಂಕಾಲದವರೆಗೆ ಕಾಯ್ದು ನೋಡುತ್ತೇನೆ. ಸಿಎಮ್ ನನ್ನ ಜೊತೆ ಹಲವು ವಿಚಾರಗಳ ಚರ್ಚೆ ಮಾಡಿದ್ದಾರೆ. ಕಳೆದ ಮೂರು ತಿಂಗಳಿಂದ ನನ್ನ ರಾಜಕೀಯ ಜೀವನದ ಕೆಟ್ಟ ದಿನಗಳು ಬಂದಿವೆ. ಕೆಟ್ಟ ದಿನ ಹೊರ ಹೋಗಿ ಒಳ್ಳೆ ದಿನಗಳು ಬರುತ್ತೆ ಅನ್ನೋ ನಿರೀಕ್ಷೆಯಿದೆ. ಜೋಶಿಯವರು ಕೇಂದ್ರ ನಾಯಕರ ಪ್ರತಿನಿಧಿಯಾಗಿ ಬಂದಿದ್ದರು. ಅವರ ಬಳಿ ನಮ್ಮ ವಿಚಾರಗಳನ್ನು ತಿಳಿಸಿದ್ದೇವೆ, ಸಂಜೆಯವರೆಗೆ ಕಾಯಲು ಹೇಳಿದ್ದಾರೆ. ಸಂಜೆವರೆಗೆ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಣದಲ್ಲಿರೋದು ನಿಶ್ಚಿತ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





