Breaking News

ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ ಬಳಿ ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ರಾಜ್ಯಾದ್ಯಕ್ಷರಿಗೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಪ್ಷನ್ ಓಪನ್ ಇದ್ದಾವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಮೋದಿ, ಅಮಿತ್ ಷಾಗೆ ಗ್ರೌಂಡ್ ಲೇವಲ್ ಏನು ನಡೀತಿದೆ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು, ಇಲ್ಲಿನ ನಾಯಕರು ಬಿಜೆಪಿ ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ.

ಕಾಂಗ್ರೆಸ್‌ನ ಮುಖಂಡರು ಯಾರೂ ಸಂಪರ್ಕಿಸಿಲ್ಲ, ಆದರೆ ಪ್ರತಿನಿಧಿ ಕಳಿಸಿದ್ದಾರೆ. ಕೆಲವರ ಹಿತಕ್ಕಾಗಿ ಬಿಜೆಪಿ ಬಲಿ‌ಕೊಡ್ತಾ ಇದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ.

ನಾನು ಎಲ್ಲಾ ಜಾಯಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ. ಟೇಕನ್ ಇಟ್ ಗ್ರ್ಯಾಂಟೆಡ್ ಅನ್ನೋ ಹಾಗೆ ಮಾತಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ಪೋಕ್ಸೊ ಆರೋಪಿ ಠಾಣೆಯಿಂದ ಎಸ್ಕೇಪ್ ಪ್ರಕರಣ, ಮೂವರು ಸಿಬ್ಬಂದಿ ಅಮಾನತು

ಠಾಣೆಯಿಂದ ಪೋಕ್ಸೊ ಆರೋಪಿ ಎಸ್ಕೇಪ್: ನಿರ್ಲಕ್ಷ್ಯಕ್ಕೆ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..! ಪೊಲೀಸರ ನಿದ್ರೆಗೆ ಆರೋಪಿ ಪರಾರಿ: ಕಲಬುರಗಿಯಲ್ಲಿ ಮೂವರಿಗೆ …

Leave a Reply

Your email address will not be published. Required fields are marked *