Breaking News

ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲಾ. ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ‌. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದೇನೆ‌. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಅವರು ಹೇಳಿದರು.

ನನ್ನ ಬೆಂಬಲಿಗರನ್ನು ಎಷ್ಟು ದಿನ ಬೆದರಿಸಿ ಇಟ್ಟುಕೊಳ್ಳಲು ಸಾಧ್ಯ.? ಅವರು ದೈಹಿಕವಾಗಿ ಅಲ್ಲಿರಬಹುದು. ಮಾನಸಿಕವಾಗಿ ನಮ್ಮ ಜೊತೆಗೇ ಇದ್ದಾರೆ. ಬಲವಂತವಾಗಿ ಹಿಡಿದಿಟ್ಟಿಕೊಳ್ಳಲು ಸಾಧ್ಯವಿಲ್ಲ. ಒಂದಲ್ಲ ಒಂದು ದಿನ‌ ಹೊರಗೆ ಬರುತ್ತಾರೆ ಎಂದು ಅವರು ಅಭಿಮಾನಿಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *