ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಗೋಕಲ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ, ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಗೌಪ್ಯ ಸಭೆ ನಡೆಯುತ್ತಿದೆ.
ಈ ಗೌಪ್ಯ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಉಪ ಮೇಯರ್ ಉಮಾ ಮುಖುಂದ, ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ರೂಪಾ ಶೆಟ್ಟಿ, ವೀರಣ್ಣ ಸವಡಿ, ಸಂತೋಷ ಚಹ್ವಾಣ, ಸೇರಿದಂತೆ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದಾರೆ.