ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕಣಕ್ಕೆ ಇಳಿದಿದ್ದರು.
ಬೆಳಗ್ಗೆ ನಗರಕ್ಕೆ ಆಗಮಿಸಿದ್ದ ಭಗವಂತ್ ಮಾನ್ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದರು. ಬಳಿಕ ಸಾಯಂಕಾಲ ಟೆಂಪಲ್ ರನ್ ನಡೆಸಿದರು. ದೇಶಪಾಂಡೆ ನಗರದಲ್ಲಿರುವ ಗುರಯದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಳೇ ಹುಬ್ಬಳ್ಳಿಯ ಪತೇಶಾವಲಿ ದುರ್ಗಾಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದರು.
ಸಾಯಂಕಾಲ ಪಶ್ಚಿಮ ಕ್ಷೇತ್ರದ ಅಭ್ಯರ್ಥಿ ಎಂ.ಅರವಿಂದ್, ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ವಿಕಾಸ್ ಸೊಪ್ಪಿನ ಮತ್ತು ಪೂರ್ವ ಕ್ಷೇತ್ರದ ಅಭ್ಯರ್ಥಿ ಬಸವರಾಜ್ ತೇರದಾಳ ಪರ ಬೃಹತ್ ರೋಡ್ ಶೋ ನಡೆಸಿದರು. ಇಂಡಿ ಪಂಪ್ ಸರ್ಕಲ್ ನಿಂದ ಹಳೇ ಹುಬ್ಬಳ್ಳಿಯವರೆಗೂ ರೋಡ್ ಶೋ ನಡೆಸಿದರು.
ಬಳಿಕ ಮಾತನಾಡಿದ ಅವರು ಜನಬೆಂಬಲ ಕಂಡು ನನಗೆ ಸಂತೋಷವಾಗಿದೆ. ಪಂಜಾಬ್ ಹಾಗೂ ದೆಹಲಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ನಿಮ್ಮ ಮುಂದೆ ಇವೆ. ಇದೇ ಮಾದರಿ ಸರ್ಕಾರ ರಚನೆ ಮಾಡಬೇಕು ಅಂದ್ರೆ ಆಮ್ ಆದ್ಮಿ ಪಕ್ಷ ಬೆಂಬಲಿಸುವಂತೆ ಮನವಿ ಮಾಡಿದರು.


bigtvnews | Hubli Dharwad News | Kannada News | Karnataka News Hubli News | News In Hubli | Local news





