ಹುಬ್ಬಳ್ಳಿ: ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಕಾರಣ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು ಎಂದು ಅವರು ಹೇಳಿದ್ದಾರೆ.
ನಳಿನ್ ಕಟೀಲ ಕುಮಾರ್ ಹಾಗೂ ಇತರ ಮಾನಸಪುತ್ರಿಗೆ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ.