Breaking News

ಹುಬ್ಬಳ್ಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಆಗಮನ, ಶೆಟ್ಟರ್ ನೇತೃತ್ವದಲ್ಲಿ ಅದ್ದೂರಿ ಸ್ವಾಗತ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಹುಬ್ಬಳ್ಳಿಗೆ ಬಂದಿಳಿದ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ್ ಪಾಟೀಲ್ ಸೇರಿ ಹಲವು ನಾಯಕರು ಭಾಗವಹಿಸಿದ್ದು, ಶೆಟ್ಟರ ಜೊತೆ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ.

ಇನ್ನೂ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಸದುದ್ದೇಶದಿಂದ ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿಗೆ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *