ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಚುನಾವಣಾ ಚಾಣಕ್ಯ ಅಮಿತ್ ಶಾ ನೇತೃತ್ವದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ನಾಯಕರ ಸಭೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಸಭೆಯ ಪೂರ್ವದಲ್ಲಿ ಸುದ್ಧಿಗೋಷ್ಟಿ ನಡೆಸಿರುವ ಅಮಿತ್ ಶಾ, ಇನ್ನೆನೂ ಕೆಲವು ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ. ಶತಾಯು ಗತಾಯು ಹೋರಾಟ ನಡೆಸಿ ಕಾಂಗ್ರೆಸ್ ಕಟ್ಟಿ ಹಾಕುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ತರುವ ನಿಟ್ಟಿನಲ್ಲಿ ಸಭೆ ನಡೆಸಲಾಗುತ್ತಿದೆ.
ಇನ್ನೂ ಶೆಟ್ಟರ್ ಬಿಜೆಪಿ ತೊರೆದಿದ್ದು, ಈ ನಿಟ್ಟಿನಲ್ಲಿ ಲಿಂಗಾಯತ ಮತಗಳನ್ನು ಭದ್ರಪಡಿಸುವ ಸದುದ್ದೇಶದಿಂದ ಸಭೆ ನಡೆಸಲಾಗುತ್ತಿದೆ.