ಹುಬ್ಬಳ್ಳಿ: ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದ್ರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ಮೋದಿ, ಅಮಿತ್ ಶಾ ಬಂದಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ ಎಂದು ಅಮಿತ್ ಶಾ ಭೇಟಿ ಬಳಿಕ ಮಾದ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವು ಕಾರ್ಯಕ್ರಮ ಓವರ್‌ಲ್ಯಾಪ್ ಆಗುತ್ತಿದ್ದು ಇಂದು ರಾತ್ರಿ ಪರಿಶೀಲಿಸುತ್ತೇನೆ. ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ. ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನಿಡಲಾಗಿದೆ.
ನನ್ನ ಮೇಲೆ ಮಾಡಿರುವ ಆರೋಪದ ಕುರಿತು ಸಿದ್ಧರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್, ಅವರು ಮಾತನಾಡೋದು ಹಾಸ್ಯಾಸ್ಪದವಾಗಿ ಕಾಣಿಸುತ್ತೆ.ಅವರ ಎಷ್ಟು ಜನ ನಾಯಕ್ರು ಜೈಲಿಗೆ ಹೋಗಿದ್ದಾರೆ, ಬೇಲಲ್ಲಿ ಬಂದಿದ್ದಾರೆ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





