ಹುಬ್ಬಳ್ಳಿ: ಇಡಿ ರಾಜ್ಯದಲ್ಲಿಯೇ ಈ ಬಾರಿ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಮೂಡಿದೆ. ಅದರಲ್ಲೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ ಸಂಚಲನ ಮೂಡಿಸಿದೆ. ಇದಕ್ಕೆ ಮತ್ತೇ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈ ಬಾರಿ ಜಗದೀಶ್ ಶೆಟ್ಟರ್ ಜಯಗಳಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ರಕ್ತದಲ್ಲಿ ಪತ್ರ ಬರೆದು ಕೊಡುತ್ತೇನೆ ಎಂದಿದ್ದಾರೆ
ಗೆಲುವಿನ ಸರ್ದಾರನೆಂದು ಹೆಸರು ಪಡೆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈ ಕಮಾಂಡ್ ಟಿಕೆಟ್ ತಪ್ಪಿಸಿದ್ದ ಹಿನ್ನೆಲೆಯಲ್ಲಿ, ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದರಿಂದ ಇಡೀ ರಾಜ್ಯದಲ್ಲಿಯೇ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರ ಚುನಾವಣೆಯನ್ನು ಕಾಯ್ದು ಕುಳಿತಿದ್ದಾರೆ. ಅದೇ ರೀತಿ ಮಂಜುನಾಥ ಯಂಟ್ರುವಿ ಎಂಬ ಕಾಂಗ್ರೆಸ್ ಕಾರ್ಯಕರ್ತ ತನ್ನ ರಕ್ತದಲ್ಲಿ ಈ ಬಾರಿ ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದು ಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತೆ ಎಂದರು.

bigtvnews | Hubli Dharwad News | Kannada News | Karnataka News Hubli News | News In Hubli | Local news





