Breaking News

ಕರ್ನಾಟಕ CM: ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು…

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ನಾಟಕಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ..ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಭಾನುವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಕಾರಣ, ಸಿಎಂ ಆಯ್ಕೆ

ದೆಹಲಿಗೆ ಶಿಫ್ಟ್ ಆಗಿತ್ತು. ಸೋಮವಾರವೇ ಸಿದ್ದರಾಮಯ್ಯ ದೆಹಲಿಗೆ ತೆರಳಿ ತಮ್ಮ ರಾಜಕೀಯ ದಾಳಗಳನ್ನು ಉರುಳಿಸಿದ್ದರು.ಮತ್ತೊಂದೆಡೆ ಸೋಮವಾರ ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಿ ಸಿಎಂ ಕುರ್ಚಿಗಾಗಿ ಕಸರತ್ತು ನಡೆಸಿದ್ದರು. ಶಾಸಕರ ಅಭಿಪ್ರಾಯದಂತೆ ಸಿಎಂ ಆಯ್ಕೆ ಮಾಡುವುದಕ್ಕೆ ಡಿಕೆಶಿ ವಿರೋಧಿಸಿದ್ದು, ಕೆಪಿಸಿಸಿ ಅಧ್ಯಕ್ಷರನ್ನು ಸಿಎಂ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಮೂಲಕ ಸಿಎಂ ಘೋಷಣೆ ಸಾಧ್ಯವಾಗಲಿಲ್ಲ.ಬುಧವಾರ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೆವಾಲಾ, ವೇಣುಗೋಪಾಲ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸುದೀರ್ಘ ಚರ್ಚೆ ಮಾಡಿದ್ದರು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಕಾರಣ ಸಿಎಂ ಆಯ್ಕೆ ಹೈಕಮಾಂಡ್‌ಗೆ ಕಗ್ಗಂಟಾಗಿತ್ತು, ಬುಧವಾರ ಸಂಜೆ ಡಿಕೆಶಿ ಮತ್ತು ಸಿದ್ದರಾಮಯ್ಯ ಜೊತೆ ಮಲ್ಲಿಕಾರ್ಜುನ ಖರ್ಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದರು.ಇಬ್ಬರ ಜೊತೆ ಚರ್ಚೆ ಮಾಡಿದ ಬಳಿಕ ರಾಹುಲ್ ಗಾಂಧಿ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಖರ್ಗೆ ತೀರ್ಮಾನಿಸಿದ್ದರು. ಕಾಂಗ್ರೆಸ್ ಸಿಎಂ ಆಯ್ಕೆ ಪ್ರತಿಪಕ್ಷಗಳಿಗೆ ಟೀಕಾ ವಿಚಾರ ಆಗುವುದು ಎನ್ನುವದನ್ನು ಅರಿತ ನಾಯಕರು, ಬೇಗನೆ ಸಿಎಂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ಇಂದು ಸಿಎಂ ಹೆಸರು ಘೋಷಿಸಲಾಗಿದೆ. ರಾಹುಲ್ ಗಾಂಧಿ ಜೊತೆ ಚರ್ಚೆ ಮಾಡಿದ ಬಳಿಕ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗಿದೆ.ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಪ್ರಮಾಣವಚನ..

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *