Breaking News

ಸಂಜೆ 7 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ..

ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ..

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.

ಈ ಸಭೆಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಸರ್ವಾನು ಮತದಿಂದ ಅಂಗೀಕರಿಸಲಾಗುತ್ತದೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರು ಸಹ ಉಪಸ್ಥಿತರಿರಲಿದ್ದಾರೆ ಎಂದು ಹೇಳಲಾಗಿದೆ.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *