ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರು ಪಾರ್ಕ್ ಬಳಿಯ ಆರೆಂಜ್ ಜಿಮ್ ಮಾಲೀಕ ಜಿತೇಂದ್ರ ಶೀಗಿಹಳ್ಳಿ (48) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ತಮ್ಮ ಮನೆ ಕೊಠಡಿಯ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.

ರಾತ್ರಿ ತಮ್ಮ ಮನೆಯ ಮೇಲ್ಭಾಗದಲ್ಲಿರುವ ಕೊಠಡಿಗೆ ಹೋಗಿದ್ದ ಜಿತೇಂದ್ರ ಅವರು ಎಷ್ಟೊತ್ತಾದರೂ ಹೊರಗೆ ಬಂದಿಲ್ಲ. ಕುಟುಂಬದವರು ಬಾಗಿಲು ಬಡಿದಿರೂ ತೆಗೆದಿಲ್ಲ. ಅನುಮಾನ ಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ನೇಣು ಹಾಕಿಕೊಂಡಿ ರುವುದು ಗೊತ್ತಾಗಿದೆ. ತಕ್ಷಣ ಬಾಗಿಲು `ಮುರಿದು, ಜಿತೇಂದ್ರ ಅವರನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಷ್ಟೊತ್ತಿ ಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಕುಟುಂಬದವರು ದೂರು ಕೊಟ್ಟ ಬಳಿಕ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ವಿದ್ಯಾನಗರ ಠಾಣೆ ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

