ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್
ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದತೆಯಿಂದ ಚರ್ಚೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಅವರೊಂದಿಗಿನ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ನಡೆಸಲಾಯಿತು ಎಂದು ಹೇಳಿದರು.
ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ. ಅವರು ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ. ನಾನೂ ಕೆಲವು ಸಲಹೆಗಳನ್ನು ನೀಡಿದ್ದೇನೆ. ಪಕ್ಷ ನನ್ನ ಜೊತೆಗಿದೆ ಅನ್ನೋ ಭರವಸೆಯನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಅನ್ನೋ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





