Breaking News

ಹುಬ್ಬಳ್ಳಿಯಲ್ಲಿ ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ

ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ-

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು 23 ಅನಧಿಕೃತ ಡಬ್ಬಾ ಅಂಗಡಿ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಡಬ್ಬಾ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

25 ಕಾರ್ಮಿಕರು ಎರಡು ಜೆಸಿಬಿ, ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ಅಂಗಡಿಗಳನ್ನು ತೆರವು ಮಾಡಿದರು. ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ರಸ್ತೆ ಪಕ್ಕದ ಪಾದಚಾರಿ ಮಾರ್ಗದಲ್ಲಿ ಮೂರು-ನಾಲ್ಕು ವರ್ಷಗಳಿಂದ ಕೆಲವರು ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ತೆರವು ಮಾಡಲು ಅನೇಕ ಬಾರಿ ಸೂಚನೆ ನೀಡಿದರೂ ಕೇಳಿರಲಿಲ್ಲ. ಈ ಹಿನ್ನೆಲೆಯಲ್ಲಿ ವಲಯ ಕಚೇರಿ 6ರ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ. ಬೇವೂರ ಮಾಹಿತಿ ನೀಡಿದ್ದಾರೆ. ಈ ವೇಳೆಯಲ್ಲಿ ಪಾಲಿಕೆ ಅಭಿವೃದ್ಧಿ ಅಧಿಕಾರಿಗಳು, ಎಂಜಿನಿಯರ್, ಆರೋಗ್ಯ ನಿರೀಕ್ಷಕರು ಇದ್ದರು. ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವುಗೊಳಿಸಿದ್ದಾರೆ.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *