ಗೃಹಲಕ್ಷ್ಮೀ ಯೋಜನೆ: ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅವಿಭಕ್ತ ಕುಟುಂಬಗಳಲ್ಲಿ ಗೃಹ ಲಕ್ಷ್ಮೀಗಾಗಿ ಪೈಪೋಟಿ ಶುರುವಾಗಿದೆ. ಹೀಗಾಗಿ 2000 ರೂ. ಅತ್ತೆಗಾ? ಸೊಸೆಗಾ? ಎನ್ನುವುದೇ ಗೊಂದಲವಾಗಿದೆ. ಇನ್ನು ಈ ಬಗ್ಗೆ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ ಪ್ರತಿಕ್ರಿಯಿಸಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಅತ್ತೆಗೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಪರೋಕ್ಷವಾಗಿ ಸೊಸೆಗೆ ಗೃಹಲಕ್ಷ್ಮೀ ಯೋಜನೆ ಇಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ, ನಮ್ಮಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ. ಅತ್ತೆ ಪ್ರೀತಿಯಿಂದ ಬೇಕಾದರೆ ಸೊಸೆಗೆ ಯೋಜನೆಯ ಹಣ ನೀಡಲಿ, ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





