ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು
ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು.
ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು.
ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ, ಇಎಸ್ಐ ನಿರ್ದೇಶಕರಾದ ನಾರಾಯಣ ಸ್ವಾಮಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





