Breaking News

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ..

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ

ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ 7ರಂದು ಮುದವೆ ನಿಶ್ಚಯವಾಗಿತ್ತು ಎಂದು ತಿಳಿದು ಬಂದಿದೆ.ಮೂಲತ ತಾವರಗೇರೆ ಗ್ರಾಮದ ಯುವತಿ ಜೊತೆ ನಿಶ್ಚಯವಾಗಿತ್ತು. ಆದರೆ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮದುವೆ ಆಗಬೇಕಾದ ಯುವಕ ಮೃತಪಟ್ಟರುವ ಹಿನ್ನೆಲೆ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ, ಸಧ್ಯ ಕಲಘಟಗಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಲಾಗಿದೆ ..

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *