Breaking News

ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ

ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ

ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು.

ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ ಕಂಡಿಷನ್ ಹಾಕುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಒಂದು ಅಧಿಕಾರಕ್ಕೆ ಬಂದಮೇಲೆ ಮತ್ತೊಂದು ಮಾತನಾಡುವುದು ಸರಿಯಲ್ಲ. ಇಂತಹ ಗೊಂದಕ್ಕೆ ಕೂಡಲೇ ಸ್ಪಷ್ಟವಾದ ನಿರ್ಧಾರಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತದ ಬಗ್ಗೆ ಮಾತನಾಡಿದ ಅವರು, ಇಂತಹದೊಂದು ಘಟನೆ ನಡೆಯಬಾರದಿತ್ತು. ಕಳೆದ ಸುಮಾರು ವರ್ಷಗಳಿಂದ ರೈಲ್ವೆ ಇಲಾಖೆಯಲ್ಲಿ ಇಂತಹ ಘಟನೆಗಳು ಸಂಭವಿಸಿರಲಿಲ್ಲ. ಆದರೆ ಈಗ ನೂರಾರು ಜನರು ಸಾವನ್ನಪ್ಪಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ. ದೇವರು ಮೃತರ ಕುಟುಂಬಕ್ಕೆ ದುಃಖವನ್ನು ತಡೆಯುವ ಶಕ್ತಿ ನೀಡಲಿ ಎಂದರು.

ಮೃತರ ಕುಟುಂಬಕ್ಕೆ ಹಾಗೂ ಅಪಘಾತದಲ್ಲಿ ಒಳಗಾದವರ ಕುಟುಂಬಕ್ಕೆ ಶೀಘ್ರವಾಗಿ ಪರಿಹಾರ ಕಲ್ಪಿಸುವ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿವೆ. ಕೇಂದ್ರ ರೈಲ್ವೆ ಸಚಿವರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ‌. ಈ ಪ್ರಕರಣದ ಕುರಿತು ಕೂಡ ಉನ್ನತ ಮಟ್ಟದ ತನಿಖೆಯನ್ನು ಕೂಡ ಮಾಡುವ ಮೂಲಕ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *